ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.27. ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ 20 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದಿದ್ದರು. ಇದಾದ ನಾಲ್ಕು ದಿನಗಳ ನಂತರ ಆರೋಪಿಯ ಬಂಧನವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Scroll to Top