ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪಾಪಿ ಶಿಕ್ಷಕ..! ➤ಆರೋಪಿ ಅರೆಸ್ಟ್

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶ,ಏ.29 ಉತ್ತರಪ್ರದೇಶ ಮಿರ್ಜಾಪುರದ ಕಾಲೇಜೊಂದರಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ.

ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನ ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

Also Read  ಬೆಳ್ತಂಗಡಿ: ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

ಪೋಸ್ಟ್ ಹಂಚಿಕೊಂಡಿರುವ ಡಾ. ಅರುಣೇಶ್ ಕುಮಾರ್ ಯಾದವ್ ಅವರು ತಮ್ಮನ್ನು ಭೌತಶಾಸ್ತ್ರದ ಪ್ರಾಧ್ಯಾಪಕ, ಸಾಮಾಜಿಕ ಕಾರ್ಯಕರ್ತ ಮತ್ತು ಕಿಸಾನ್ ನಾಯಕ ಎಂದು ಹೇಳಿಕೊಂಡಿದ್ದಾರೆ.ವಿಡಿಯೋ ನೋಡಿದ ತಕ್ಷಣವೇ ಉತ್ತರ ಪ್ರದೇಶದ ಪೊಲೀಸರು ಆರೋಪಿತ ಶಿಕ್ಷಕನನ್ನ ಬಂಧಿಸಿದ್ದಾರೆ.

 

 

error: Content is protected !!
Scroll to Top