(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.1. ಇಲಿ ಪಾಷಾಣ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಗರ್ಡಾಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ (60) ಅವರುಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದರು. ಚಾಲಕರಾಗಿದ್ದ ಅವರು ಸುಮಾರು ಒಂದು ವರ್ಷದಿಂದ ಕೆಲಸ ಬಿಟ್ಟು ಮನೆ ಸಮೀಪದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.
ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅವರು ಹಣದ ಕೊರತೆಯಿಂದಾಗಿ ನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಎ.22ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣ ಸೇವಿಸಿದ್ದರು. ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರವಿವಾರ ಬೆಳಗ್ಗೆ ನಿಧನ ಹೊಂದಿದರು.