(ನ್ಯೂಸ್ ಕಡಬ) newskadaba.com ಮುಂಬೈ, ಜ.13. ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ರೋಗಿಯನ್ನು ಅಕ್ರಮವಾಗಿ ಇರಿಸಿಕೊಳ್ಳುವಂತಹುದು ಕಾನೂನು ಬಾಹಿರವಾಗಿದ್ದು, ಪ್ರತಿಯೊಬ್ಬನಿಗೂ ಇದರ ಬಗ್ಗೆ ಅರಿವು ಮೂಡಿಸುವಂತೆ ಬಾಂಬೆ ಹೈಕೋರ್ಟ್ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.
ಮುಂಬೈ ಹೈಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಸಾಮಾಜಿಕ ಹಿತಾಸಕ್ತಿ ದಾವೆಯನ್ನು ವಿಚಾರಣೆ ಸಡೆಸಿದ ಕೋರ್ಟ್ ‘ಯಾವುದೇ ರೋಗಿಯನ್ನು ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಯಲ್ಲಿ ಇರಿಸಿಕೊಳ್ಳುವುದು ಕಾನೂನು ಬಾಹಿರ’ ಎಂದು ಜಸ್ಟಿಸ್ ಎಸ್. ಸಿ. ಧರ್ಮಾಧಿಕಾರಿ ಹಾಗೂ ಭರತ್ ಡಂಗ್ರೆ ಅವರನ್ನೊಳಗೊಂಡ ಪೀಠವು ಹೇಳಿದೆ. ‘ರೋಗಿಗಳಿಗಿರುವ ಕಾನೂನಾತ್ಮಕ ಹಕ್ಕುಗಳು ಮತ್ತು ಕಾನೂನು ಬಾಹಿರವಾಗಿ ನಡೆದುಕೊಂಡ ತಪ್ಪಿತಸ್ಥ ಆಸ್ಪತ್ರೆಗಳ ವಿರುದ್ಧ ಕೈಗೊಳ್ಳ ಬಹುದಾದ ಕ್ರಮಗಳ ಬಗ್ಗೆಯೂ ಸಮಗ್ರವಾದ ಮಾಹಿತಿಯನ್ನು ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸುವಂತೆಯೂ ಮಹಾರಾಷ್ಟ್ರದ ಆರೋಗ್ಯ ಇಲಾಖೆಗಳಿಗೆ ಸೂಚಿಸಿದೆ.