ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ➤ರಾಜ್ಯಾದ್ಯಂತ 58,000 ಬೂತ್‌ಗಳಲ್ಲಿ ಜಾಗೃತಿ ಅಭಿಯಾನ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ತಮ್ಮ ಮತಗಟ್ಟೆಗಳ ಬಗ್ಗೆ ಅರಿವು ಮೂಡಿಸಲು ‘ನಮ್ಮ ನಡೆ ಮತಗಟ್ಟೆಯ ಕಡೆ’ ಎಂಬ ವಿಶೇಷ ಕಾರ್ಯಕ್ರಮವನ್ನು ರಾಜ್ಯಾದ್ಯಂತ 58 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು ಉತ್ತರದ ಜಕ್ಕೂರಿನಲ್ಲಿರುವ ತಮ್ಮ ಮತಗಟ್ಟೆಗೆ ಭೇಟಿ ನೀಡುವ ಮೂಲಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮತಗಟ್ಟೆಗಳಲ್ಲಿ ‘ಮೇ 10 ರಂದು ಪ್ರಜಾಪ್ರಭುತ್ವದ ಮತದಾನದ ಹಬ್ಬ’ ಎಂಬ ಧ್ಯೇಯವಾಕ್ಯದೊಂದಿಗೆ ಧ್ವಜಾರೋಹಣ ಮತ್ತು ವಾಕಥಾನ್ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Also Read  ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?!

error: Content is protected !!
Scroll to Top