ಕೆ.ಸುಬ್ರಹ್ಮಣ್ಯ ರೈ ಮನೆ ಮೇಲೆ ಐಟಿ ದಾಳಿ..!​ ➤ 1 ಕೋಟಿ. ರೂ.ವಶಕ್ಕೆ!​*

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03  ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಐಟಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ, ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಐಟಿ ದಾಳಿಗೆ ಒಳಗಾಗಿರುವ ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರ ಎಂದು ತಿಳಿದು ಬಂದಿದೆ.

Also Read  ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು        

 

 

 

 

 

 

error: Content is protected !!
Scroll to Top