* ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶವಿಲ್ಲ..!​* ➤ ಹೈಕೋರ್ಟ್ ಆದೇಶ 

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಮೇ..03 ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ನೆಲೆಸಿದ ದೇಶಗಳಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಶುಶ್ರೂಷಕರಾಗಿ ಕೆಲಸ ಮಾಡುತ್ತಿರುವ ಮತ್ತು ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ಎಂ. ರವಿ ಅವರು ಸಲ್ಲಿಸಿದ್ದ ಪಿಎಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಇದ್ದ ರಜಾ ಕಾಲದ ಪೀಠದಿಂದ ಪಿಎಎಲ್ ವಜಾಗೊಳಿಸಿ ಆದೇಶ ನೀಡಲಾಗಿದೆ.

Also Read  ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ  

 

 

 

error: Content is protected !!
Scroll to Top