ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ ► ಶಪಥ ಹಾಕಿದ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕೋಲಾರ, ಜ.14. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ವಿರುದ್ಧದ ಹಗರಣಗಳನ್ನು ಬಯಲಿಗೆಳೆಯದಿದ್ದರೆ ನನ್ನ ಹೆಸರು ಯಡಿಯೂರಪ್ಪನೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಚಾರ್ಜ್ ಶೀಟ್ ಸಿದ್ಧಮಾಡುತ್ತಿದ್ದೇವೆ. ನಾವು ಅಧಿಕಾರಕ್ಕೆ ಬಂದ ತಕ್ಷಣ ಅವರ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಶಪಥ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಹೋದ ಕಡೆಯೆಲ್ಲಾ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಹೇಳಿಕೆ ನೀಡುತ್ತಿದ್ದಾರೆ, ದೇಶದಲ್ಲಿ ಈಗಾಗಲೆ ಅಚ್ಚೇದಿನ್ ಬಂದಿದ್ದು, ಕರ್ನಾಟಕದಲ್ಲೂ ಅಚ್ಚೇದಿನ್ ಬರಬೇಕಾದರೆ ಸಿದ್ದರಾಮಯ್ಯ ಮನೆಗೆ ಹೋಗಬೇಕು ಎಂದರು.

Also Read  ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!!  

error: Content is protected !!
Scroll to Top