ಇದು ನನ್ನ ಕೊನೆಯ ಚುನಾವಣೆ ➤ ಜಗದೀಶ್ ಶೆಟ್ಟರ್ ಘೋಷಣೆ

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, ಮೇ. 03. ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.  ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದು, ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದಿದ್ದಾರೆ.

ಇನ್ನು ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ಪಕ್ಷದಲ್ಲಿಯೇ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಆರೋಪ ಮಾಡಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡಿ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

Scroll to Top