ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ. 03.  ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ.

ಇನ್ನು ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45) ಅವರಿಗೆ ಸುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Scroll to Top