ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ಲೋಕಸಭಾ ಚುನಾವಣೆ ವೇಳೆ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಎಲ್ಲರಿಗೂ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ, ಜನರು ನನ್ನ ಮಾತು ಕೇಳಲಿಲ್ಲ.

ಸುಮಲತಾ ಅಂಬರೀಶ್ ರವರನ್ನು ಗೆಲ್ಲಿಸಿದ್ದು ಸರಿಯಲ್ಲ ಅಂತಾ, ನನಗೆ ಈಗ ಅನಿಸುತ್ತಿದೆ,” ಎಂದು ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.”ಲೋಕಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ ಜನರು ನನ್ನ ಮಾತು ಕೇಳಲಿಲ್ಲ. ಸುಮಲತಾ ಗೆಲ್ಲಿಸಿದ್ದು ಸರಿಯಲ್ಲ ಅಂತಾ ಈಗ ನನಗೆ ಅನಿಸ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸುಮಲತಾ ಅಂಬರೀಶ್ ಗೆಲ್ಲಿಸಬಾರದಿತ್ತು,” ಎಂದಿದ್ದಾರೆ.

Also Read  ಪಂಜ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ..! ➤ ಕಾರು ಸಂಪೂರ್ಣ ಸುಟ್ಟು ಕರಕಲು

 

 

error: Content is protected !!
Scroll to Top