ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ…!

(ನ್ಯೂಸ್ ಕಡಬ)Newskadaba.com ಹಾಸನ,ಮೇ.04 ವಿಧಾನಸಭೆ ಚುನಾವಣೆ ಹೊತ್ತಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ.ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಕೋಡಿಮಠದ ಶ್ರೀಗಳ ಜೊತೆ ಮಾತುಕತೆ ನಡೆಸಿದ್ದು ಶ್ರೀಗಳು ನುಡಿದ ಭವಿಷ್ಯದ ಬಗ್ಗೆ ಕುತೂಹಲ ಮೂಡಿದೆ.

ಒಂದು ಗಂಟೆ ಚರ್ಚೆ ಬಳಿಕ ಶ್ರೀಗಳ ಆಶೀರ್ವಾದ ಪಡೆದು ಸಿದ್ದರಾಮಯ್ಯ ಖುಷಿಯಾಗಿ ಹೊರ ಬಂದಿದ್ದಾರೆ. ಸಿದ್ದುಗೆ ಹಾರ ಹಾಕಿ ಸನ್ಮಾನ ಮಾಡಿ ಶುಭ ಹಾರೈಸಿ ಶ್ರೀಗಳು ಕಳುಹಿಸಿದ್ದಾರೆ. ರಾಜಕೀಯ ಭವಿಷ್ಯ ನುಡಿಯುವ ಶ್ರೀಗಳು ಸಿದ್ದರಾಮಯ್ಯರ ರಾಜಕೀಯ ಭವಿಷ್ಯದ ಬಗ್ಗೆ ಏನು ಹೇಳಿದ್ದಾರೆ ಎಂಬುದು ಸದ್ಯಕ್ಕಿರುವ ಕುತೂಹಲ.

Also Read  ಮಂಗಳೂರು: 'ತುಡರ್' ತುಳು ಸಿನಿಮಾದ ಪೋಸ್ಟರ್ ಬಿಡುಗಡೆ

 

 

 

error: Content is protected !!