ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಯ ‘ಶುಲ್ಕ ಪಾವತಿ’ಗೆ ಅವಧಿ ವಿಸ್ತರಣೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ.22ರಿಂದ ಆರಂಭಗೊಂಡು, ಜೂನ್ 5ರವರೆಗೆ ನಡೆಯಲಿದೆ. ಇಂತಹ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02-05-2023ವರೆಗೆ ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳು, ಪೋಷಕರ ಮನವಿಯ ಮೇರೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 04-05-2023ರಿಂದ 06-05-2023ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

 

 

Scroll to Top