ಬಿಜೆಪಿ ಯುವ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ➤   ಎನ್ ಐಎಯಿಂದ ಮತ್ತಿಬ್ಬರ ವಿರುದ್ಧ ಚಾರ್ಜ್ ಶೀಟ್..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ಬಿಜೆಪಿ ಯುವಮೋರ್ಚಾ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ. 2022ರ ಜುಲೈ 26ರಂದು ಈಗ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ನ ಭಾರತ(ಪಿಎಫ್‌ಐ) ಕಾರ್ಯಕರ್ತರಿಂದ ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಅವರ ಅಂಗಡಿಯ ಮುಂದೆ ಹತ್ಯೆಗೀಡಾಗಿದ್ದರು.

ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ತುಫೈಲ್ ಎಂಎಚ್ ಮತ್ತು ಮಹಮ್ಮದ್ ಜಬೀರ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ. ಯುಎಪಿಎ ಕಾಯ್ದೆಯಡಿ ಒಟ್ಟು ಈ ಪ್ರಕರಣದಲ್ಲಿ 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಎನ್‌ಐಎ ತಿಳಿಸಿದೆ. ಕೊಲೆ ನಂತರ ತಲೆಮರೆಸಿಕೊಂಡಿದ್ದ ತುಫೈಲ್ ನನ್ನು ಎನ್‌ಐಎ ತಂಡ ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿತ್ತು.

Also Read  ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್

 

 

error: Content is protected !!
Scroll to Top