SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಮೇ.08.  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಮೇ.8 ರಂದು) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ.

ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಶೇ.96 ದೊಂದಿಗೆ ಈ ಬಾರಿ ಎಸ್‌ ಎಸ್‌ ಎಲ್‌ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಡ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಹಾಸನ 3ನೇ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರು ಗ್ರಾ. ಜಿಲ್ಲೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆ 18ನೇ ಸ್ಥಾನವನ್ನು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ 19ನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ವರದಿ ತಿಳಿಸಿದೆ.

Also Read  ಆಪೆ ರಿಕ್ಷಾಗೆ KSRTC ಬಸ್ ಢಿಕ್ಕಿ ►ಇಬ್ಬರ ದುರ್ಮರಣ

 

error: Content is protected !!
Scroll to Top