ಐದು ಕೆಜಿ ಐಇಡಿ ಹೊಂದಿದ್ದ ಉಗ್ರನ ಬಂಧನ ➤ ತಪ್ಪಿದ ದೊಡ್ಡ ದುರಂತ

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ.08. ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ 5 ಕೆಜಿ ಸುಧಾರಿತ ಸ್ಫೋಟಕ ಸಾಧನದೊಂದಿಗೆ (ಐಇಡಿ) ಉಗ್ರನೊಬ್ಬನನ್ನು ಬಂಧಿಸಿ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಪುಲ್ವಾಮಾ ಪೊಲೀಸರು ಭಯೋತ್ಪಾದಕ ಸಹಚರ ಇಶ್ಫಾಕ್ ಅಹ್ಮದ್ ವಾನಿ ಅನ್ನು ಬಂಧಿಸುವ ಮತ್ತು ಐಇಡಿ (ಸುಮಾರು 5-6 ಕೆಜಿ) ವಶಪಡಿಸಿಕೊಳ್ಳುವ ಮೂಲಕ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

Also Read  ರಾಹುಲ್ ಗಾಂಧಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ   

 

error: Content is protected !!
Scroll to Top