ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಪ್ರಕರಣ ➤ ಇಂದು BJP ನಾಯಕರಿಂದ ಮಡಿವಾಳ ಠಾಣೆ ಮುಂದೆ ಪ್ರತಿಭಟನೆ.!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ನಿನ್ನೆ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಮಾಡಿದಂತ ಘಟನೆ ಬಿಟಿಎಂ ಲೇಔಟ್ ನಲ್ಲಿ ನಡೆದಿತ್ತು. ಇಂದು ಈ ಘಟನೆ ಖಂಡಿಸಿ ಬಿಜೆಪಿಯ ಘಟಾನುಘಟಿ ನಾಯಕರು ಮಡಿವಾಳ ಠಾಣೆಯ ಮುಂದೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ವೇಳೆಯಲ್ಲಿ ಬೆಂಗಳೂರಿನ ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಆರೋಪಿಸಿ, ಇಂದು ಈ ಘಟನೆಯನ್ನು ಖಂಡಿಸಿ ಬಿಜೆಪಿ ಅಭ್ಯರ್ಥಿ ಕೆ ಆರ್ ಶ್ರೀಧರ್ ರೆಡ್ಡಿ ನೇತೃತ್ವದಲ್ಲಿ ಮಡಿವಾಳ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ.ಈ ಪ್ರತಿಭಟನೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಭಾಸ್ಕರ್ ರಾವ್ ಹಾಗೂ ರಾಜ್ಯ ಬಿಜೆಪಿ ಚುನಾವಮಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಕೂಡ ಭಾಗವಹಿಸಿದ್ದಾರೆ.

 

 

 

Scroll to Top