(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮತದಾನಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದೆ. ಶಾಂತಿಯುತ, ನಿರ್ಭೀತ ಹಾಗೂ ನ್ಯಾಯಯುತ ಮತದಾನಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಳೆ ಮೇ 10 ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯದೆಲ್ಲೆಡೆ 1 ಲಕ್ಷದ 56 ಸಾವಿರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಇಲ್ಲಿನ ಪೊಲೀಸ್ ಸಿಬ್ಬಂದಿಯ ಜೊತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪೆನಿಗಳನ್ನು ನಿಯೋಜಿಸಲಾಗಿದೆ. ಮತದಾನಕ್ಕೆ ಸೂಕ್ತ ಭದ್ರತೆ ಕಲ್ಪಿಸುವ ಸಲುವಾಗಿ ಚುನಾವಣಾ ಕರ್ತವ್ಯಕ್ಕೆಂದು 304 ಡಿವೈಎಸ್ಪಿನಗಳು, 991 ಪಿಐಗಳು, 2,610 ಪಿಎಸ್ಐ ಗಳು, 5,803 ಎಎಸ್ಐಕಗಳು, 46,421 ಹೆಚ್ಸಿಯ/ಪಿಸಿಗಳು, 27,990 ಹೋಮ್ಗಾತರ್ಡ್ಗ್ಳು ಸೇರಿದಂತೆ ಒಟ್ಟು 84,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜನೆಗೊಳಿಸಲಾಗಿದೆ.