ಮಂಗಳೂರು: (ನಾಳೆ)ಮೇ.10ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಜೆ ಘೋಷಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.09. ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಸಾರ್ವಜನಿಕ ರಜೆ ಘೋಷಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು) ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‌ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಡಬದಲ್ಲಿ ‘ಆಫರೇಷನ್ ಎಲಿಫೆಂಟ್’; ಸಾಕಾನೆಗಳ ಸಹಕಾರದಲ್ಲಿ ಮುಂದುವರಿದ ಕಾರ್ಯಾಚರಣೆ !     

 

 

error: Content is protected !!
Scroll to Top