ಮಂಗಳೂರು: ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಇ-ಗ್ಯಾಜೆಟ್‌ಗಳು ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.09. ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಧಿಸಿದಂತೆ ಮೇ.10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‌ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.

ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟಾçನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

Also Read  ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ

 

ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರಾತಿನಿಧಿ ಕಾಯ್ದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆಯ ಕಾಯ್ದೆಯನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

error: Content is protected !!
Scroll to Top