ಗಡಿಭಾಗಗಳಲ್ಲಿ ಪೊಲೀಸರಿಂದ ಕಟ್ಟೆಚ್ಚರ ➤ ನಕಲಿ ಮತದಾನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.10. ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ.


ಇಂದು ರಾಜ್ಯದ ಗಡಿ ಭಾಗಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಚುನಾವಣಾ ಭದ್ರತೆ ಬಗ್ಗೆ ಮಾಹಿತಿ ನೀಡಿದ್ದಾರೆ.


ರಾಜ್ಯದ ಎಲ್ಲ ಚೆಕ್ ಪೋಸ್ಟ್ಗಳಲ್ಲಿ ಭಾರಿ ಭದ್ರತೆ ಇರಲಿದ್ದು ಎಲ್ಲ ಎಸ್‌ಪಿ, ಕಮಿಷನರ್ಗಳು ರಾತ್ರಿ ಗಸ್ತು ತಿರುಗಲಿದ್ದಾರೆ. ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರನ್ನು ಪರಿಶೀಲನೆ ನಡೆಸಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ವಿನಾಕಾರಣ ಬೇರೆ ರಾಜ್ಯದಿಂದ ಬರುವಂತಿಲ್ಲ. ಯಾವುದೇ ನಕಲಿ ಮತದಾನ ಆಗದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Scroll to Top