ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಮಾಜದ ಮೇಲೆ ನಡೆಯುವ ಅಪರಾಧ ಕೃತ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.10. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕೇವಲ ಮಕ್ಕಳಿಗೆ ವಿರುದ್ಧ ಮಾತ್ರವಲ್ಲದೇ ಇಡೀ ಸಮಾಜದ ವಿರುದ್ಧದ ಕೃತ್ಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

28 ವರ್ಷದ ವ್ಯಕ್ತಿಯೊಬ್ಬರನ್ನು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಪ್ರಕರಣದಲ್ಲಿ ನಿರಪರಾಧಿ ಎಂಬುದಾಗಿ ಪ್ರಕಟಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದು ಪಡಿಸಿ ಹೈಕೋರ್ಟ್​ ಆದೇಶಿಸಿದೆ.

Scroll to Top