ಹಾಸನ: ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

 (ನ್ಯೂಸ್ ಕಡಬ) newskadaba.com. ಹಾಸನ ,ಮೇ. 10. ರಾಜ್ಯದೆಲ್ಲೆಡೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7ಗಂಟೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸುತ್ತಿದ್ದಾರೆ.

ಆದ್ರೆ ಹಾಸನದಲ್ಲಿ ಅವಘಡವೊಂದು ಸಂಭವಿಸಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತದಾನ ಮಾಡಿದ ನಂತರ ಜಯಣ್ಣ(49) ಎಂಬ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾನ ಮಾಡಿ ಹೊರಬಂದ ನಂತರ ಜಯಣ್ಣ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top