(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.12 ವಿವಿಧ ಇಲಾಖೆಗಳಲ್ಲಿನ ನಾನ್ ಗೆಜೆಟೆಡ್ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ 15ರಷ್ಟು ಒಟ್ಟು ಮೀಸಲಾತಿ, ವಯೋಮಿತಿಯಲ್ಲಿ ಸಡಿಲಿಕೆ ಹಾಗೂ ದೈಹಿಕ ಪರೀಕ್ಷೆಯಿಂದ ವಿನಾಯಿತಿ ನೀಡಲಿದೆ ಎಂದು ಮೂಲಗಳು ಹೇಳಿವೆ.
ಅಗ್ನಿವೀರರಿಗೆ ಈ ಸೌಲಭ್ಯಗಳನ್ನು ನೀಡುವುದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವಂತೆ ರೈಲ್ವೆ ವಲಯಗಳ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ಮಂಡಳಿ ಪತ್ರ ಬರೆದಿದೆ.ರೈಲ್ವೆಯ ವಿವಿಧ ವಿಭಾಗಗಳಲ್ಲಿನ ಹಂತ-1 ಹಾಗೂ ಹಂತ-2 ಹಾಗೂ ಅದಕ್ಕೂ ಮೇಲ್ಪಟ್ಟ ಹುದ್ದೆಗಳಿಗೆ ಈ ಸೌಲಭ್ಯ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.