‘ಮೈತ್ರಿಗೆ ನಾವು ಸಿದ್ಧ’, ಎರಡು ಪಕ್ಷಗಳೂ ನಮ್ಮ ಸಂಪರ್ಕದಲ್ಲಿವೆ ➤ ಹೆಚ್​ಡಿ. ಕುಮಾರಸ್ವಾಮಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.12. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇಲ್ಲ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ, ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ, ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ.

ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ. ಮೈತ್ರಿಗೆ ನಾವು ಸಿದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Also Read  ಸಾರಥಿ ಇಲ್ಲದ ಜೆಡಿಎಸ್ ಮಹಿಳಾ ಘಟಕಕ್ಕೆ ➤ ರಾಜ್ಯಾಧ್ಯಕ್ಷರಾಗಿ ಲೀಲಾದೇವಿ ಆರ್.ಪ್ರಸಾದ್ ಆಯ್ಕೆ

error: Content is protected !!
Scroll to Top