ಮಲೆಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆಯ ಮುಂಭಾಗದ ತಡೆಗೋಡೆ ಕುಸಿತ➤

(ನ್ಯೂಸ್ ಕಡಬ)Newskadaba.com ಚಾಮರಾಜನಗರ,ಮೇ.12 ಚಾಮರಾಜನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸೈಡ್. ಇನ್ನೂ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಗೆ ಹಾನಿಯಾಗಿದೆ.

ರಾಜ್ಯದ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿತಗೊಂಡಿದೆ. ಪ್ರತಿಮೆ ಸ್ಥಳದಲ್ಲಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿರುವುದರಿಂದ ಭಕ್ತರ ಪ್ರವೇಶ ನಿಷೇಧ ಮಾಡಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಕೆಲ ದಿನಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುವುದು ಎಂದು ಪ್ರಾಧಿಕಾರದ ಮಾಹಿತಿ ನೀಡಿದೆ.

Also Read  ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶಕ್ಕಾಗಿ ಇಲ್ಲಿ ನೋಡಿ

 

 

 

error: Content is protected !!
Scroll to Top