ಚಾಮರಾಜನಗರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಸೋಲು..!

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ಸುತ್ತಿನಲ್ಲಿ ಹಾವು- ಏಣಿ ಆಟ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಸಂಪುಟದಲ್ಲಿ ವಸತಿ ಸಚಿವರಾಗಿರುವ ವಿ. ಸೋಮಣ್ಣ ಅವರು ಬಿಜೆಪಿ ವರಿಷ್ಠರ ಸೂಚನೆಯಂತೆ ಚಾಮರಾಜನಗರ ಹಾಗು ಮೈಸೂರಿನ ವರುಣಾದಿಂದ ಸ್ಪರ್ಧಿಸಿದ್ದಾರೆ.
ಚಾಮರಾಜನಗರದಲ್ಲಿ ಕಾಂಗ್ರೆಸ್‌ನ ಪುಟ್ಟರಂಗ ಶೆಟ್ಟಿ ವಿರುದ್ಧ ಸೋಲನುಭವಿಸಿದ್ದಾರೆ. ವರುಣಾದಲ್ಲಿ ಸಿದ್ಧರಾಮಯ್ಯ ವಿರುದ್ಧವೂ ಸೋಲನುಭವಿಸಿದ್ದಾರೆ. ಆರಂಭಿಕ ಮತ ಎಣಿಕೆಯಲ್ಲಿ ಹಿನ್ನಡೆ ಸಾಧಿಸಿದಾಗ ಸೋಲಿನ ಭೀತಿ ಎದುರಾಗುತ್ತಿದ್ದಂತೆ ಮತ ಕೇಂದ್ರದಿಂದ ಹೊರ ನಡೆದಿದ್ದರು.

 

Also Read  ಸ್ಥಗಿತಗೊಂಡಿದ್ದ ಮುಂಬೈ-ಮಂಗಳೂರು ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಪುನರಾರಂಭ

 

 

 

 

error: Content is protected !!