ಕಾಸರಗೋಡು: ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ



(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.16. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 58 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.








ಕಯ್ಯಾರಿನ ಮುಹಮ್ಮದ್ ಹಾರಿಸ್ (30) ಮತ್ತು ಬಂದ್ಯೋಡು ಇಚ್ಲಂಗೋಡಿನ ಇಬ್ರಾಹಿಂ ಬಾತಿಷ್ (30) ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ವಾಮಂಜೂರು ಬಳಿ ವಾಹನ ತಪಾಸಣೆ ನಡೆಸಿದಾಗ ಕಾರಲ್ಲಿದ್ದ ಇಬ್ಬರು ಪರಾರಿಯಾಗಲೆತ್ನಿಸಿದ್ದು, ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾದರು.






error: Content is protected !!
Scroll to Top