ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ರಾಜ್ಯ ಮುಖ್ಯಮಂತ್ರಿ ಫೈಟ್ ➤ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಹೆಸರು ಬಹುತೇಕ ಫೈನಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.17. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಿದ್ಧರಾಮಯ್ಯ ಮತ್ತು ಡಿಕೆಶಿ ನಡುವೆ ನಡೆಯುತ್ತಿರುವ ಗುದ್ದಾಟವು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹೆಸರು ಬಹುತೇಕ ಅಂತಿಮವಾಗಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅಧಿಕಾರ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿ ಜೊತೆಗೆ ಪ್ರಮುಖ ಎರಡು ಖಾತೆಗಳನ್ನು ಡಿ.ಕೆ.ಶಿವಕುಮಾರ್ ನಿರ್ವಹಿಸಲಿದ್ದಾರೆ. ನಾಳೆ ಮೇ.18 ರಂದು ಅದ್ಧೂರಿ ಕಾರ್ಯಕ್ರಮದ ಮೂಲಕ ಪ್ರಮಾಣ ವಚನ ನಡೆಯಲಿದೆ ಎಂದು ವರದಿ ತಿಳಿಸಿದೆ.

error: Content is protected !!

Join the Group

Join WhatsApp Group