ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ.!➤ನಳಿನ್ ಕುಮಾರ್ ಕಟೀಲ್ 

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಜನ ವಿದ್ಯುತ್ ಬಿಲ್ ಕಟ್ಟಬಾರದು. ತಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದರು.

ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್ ಉಚಿತ ಎಂದು ತಿಳಿಸಿದ್ದರು. ಹೀಗಾಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಹೇಳಿದ್ದಾರೆ.ಸಿದ್ಧರಾಮಯ್ಯನವರೇ ಹೇಳಿರುವಾಗ ಜನ ಏಕೆ ವಿದ್ಯುತ್ ಬಿಲ್ ಕಟ್ಟುತ್ತಾರೆ? ನನ್ನ ಪ್ರಕಾರ ಯಾರೂ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

 

 

Scroll to Top