91ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಮಂತ್ರಿ ಹೆಚ್​.ಡಿ ದೇವೇಗೌಡ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್​.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

‘ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ‘ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್.ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು, ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

Also Read  ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್

 

 

error: Content is protected !!
Scroll to Top