ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com. ಸುಳ್ಯ, ಮೇ.18. ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ರವರು ಆಕಸ್ಮಿಕವಾಗಿ  ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ತುದಿಯಡ್ಕ ಬಳಿ ಅವರು ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ಬೇಕಾದ ನೀರು ಸರಬರಾಜು ಮಾಡಲು ಅಳವಡಿಸಿದ್ದ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್ ರೈ ಮೇನಾಲ ಬಿಜೆಪಿಯ ಪ್ರಭಾವೀ ಮುಖಂಡರಾಗಿ ಅನೇಕ ಕ್ಷೇತ್ರದಲ್ಲಿ  ಸಕ್ರೀಯರಾಗಿದ್ದರು.

error: Content is protected !!
Scroll to Top