ಬಿಸಿಯೂಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com. ಪಾಟ್ನಾ, ಮೇ.19. ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ವೇಳೆ ಈ ಘಟನೆ ನಡೆದಿದೆ.

ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿತು. ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 36 ವಿದ್ಯಾರ್ಥಿಗಳು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ವೈದ್ಯ ಡಾ.ಸಂತೋಷ್ ತಿಳಿಸಿದ್ದಾರೆ. ಈ ಘಟನೆ ಕುರಿತು ಜಿಲ್ಲಾಡಳಿತ ಮಾಹಿತಿ ಕೇಳಿದೆ.ಎಸ್‌ಡಿಎಂ ಸಂಜಯ್ ಕುಮಾರ್ ರೈ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸರಬರಾಜು ಮಾಡುವ ಎನ್‌ಜಿಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

error: Content is protected !!
Scroll to Top