ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ,ಮೇ.19 ಕಟ್ಟಿಗೆ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಕ್ರೂಸರ್ ನಲ್ಲಿದ್ದ ಇಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ನಡೆದಿದೆ.

ಟ್ರ್ಯಾಕ್ಟರ್ ಡಿಕ್ಕಿ ಬಳಿಕ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿದೆ. ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Scroll to Top