ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.20. ಪ್ರಥಮ ವರ್ಷದ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಮೇ.15ರಂದು ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ.

ಮನೆಯಿಂದ ವ್ಯಾಸಂಗ ಮಾಡುತ್ತಿದ್ದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ. 18 ವರ್ಷದ ಅವರು ಕನ್ನಡ, ಇಂಗ್ಲಿಷ್‌, ಹಿಂದಿ ಭಾಷೆ ಬಲ್ಲರು. ಈ ಬಗ್ಗೆ ಕಾಣೆಯಾದವರ ತಂದೆ ಮಹಮ್ಮದ್‌ ಖಾಲಿಕ್‌ ಅವರು ಮಂಗಳೂರು ಪೂರ್ವ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್‌ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್‌ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್‌ ಪ್ರಕಟಣೆ ತಿಳಿಸಿದೆ.

Also Read  ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                            

 

error: Content is protected !!
Scroll to Top