‘ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ’ ?       ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. 2000 ರೂಪಾಯಿ ಮುಖಬೆಲೆ ನೋಟನ್ನು ಹಿಂಪಡೆಯುವುದರ ಬಗ್ಗೆ ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು.

Also Read  ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

 

error: Content is protected !!
Scroll to Top