ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ತಡೆಯಾಜ್ಞೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.20. ವಾರಾಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವ ‘ಶಿವಲಿಂಗ’ ಎಷ್ಟು ವರ್ಷ ಹಳೆಯದು ಎಂದು ತಿಳಿಯಲು ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಹಾಗೂ ವೈಜ್ಞಾನಿಕ ಸರ್ವೇ ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಸದ್ಯಕ್ಕೆ ಹೈಕೋರ್ಟ್ ನಿರ್ದೇಶನಗಳನ್ನು ಮುಂದೂಡುವ ಆದೇಶವನ್ನು ನೀಡಿದೆ.

 

Scroll to Top