ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Also Read  ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು

 

error: Content is protected !!
Scroll to Top