ಸುಳ್ಯ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮೇ. 23. ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಾಣಿ ಮೈಸೂರು ಹೆದ್ದಾರಿ ಸಮೀಪದ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಸುಳ್ಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮರ್ಕಂಜ ಗ್ರಾಮದ ನಿವಾಸಿ ನವೀನ್ ಸಂಕೇಶ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Scroll to Top