(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಕಳೆದು ಮೂರು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಸಂಜೆಯಾಗುತ್ತಿದ್ದಂತೆ ಸುರಿಯುವ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಅಂಡರ್‌ಪಾಸ್, ರಸ್ತೆಗಳಲ್ಲಿ ನೀರು ತುಂಬಿಕೊಳ್ಳುತ್ತಿರುವುದರಿಂದ ರಸ್ತೆ ಸಂಚಾರ ಸುಗಮವಾಗಿರದೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.