ಅಬಕಾರಿ ಅಧಿಕಾರಿಗಳು ಮತ್ತು  ಗ್ರಾಮಸ್ಥರ ನಡುವೆ ವಾಗ್ವಾದ.!➤ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಬಿಹಾರ,ಮೇ.24 ಅಕ್ರಮ ಮದ್ಯದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳೆದುರು ಸ್ಥಳೀಯರು ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಅಬಕಾರಿ ಇಲಾಖೆಯ ವಾಹನವು ಪಿಪ್ರಾ ಸಂಸಾ ಪಿಡಬ್ಲ್ಯೂಡಿ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ, ಮದ್ಯ ಸೇವಿಸಿದ ಶಂಕಿತ ವ್ಯಕ್ತಿಗಳನ್ನು ತನಿಖೆ ಮಾಡಲು ಅಧಿಕಾರಿಗಳು ಕಾರಿನಿಂದ ಇಳಿದಿದ್ದಾರೆ.ಈ ವೇಳೆ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ವಾಗ್ವಾದ ಉಂಟಾಗಿ ವಿಕೋಪಕ್ಕೆ ತಿರುಗಿದೆ. ಗ್ರಾಮಸ್ಥರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಿಥಿಲೇಶ್ ಚೌಧರಿ ಅವರ ನಿವಾಸದ ಮೇಲೆ ಗೌಪ್ಯ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

 

 

Scroll to Top