ಮಹಿಳೆಯ ಅಶ್ಲೀಲ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ಕಿಡಿಗೇಡಿ.! ➤ದೂರು ದಾಖಲು

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.25 ಮಹಿಳೆಯ ಖಾಸಗಿ ಫೋಟೋ, ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡೂರು ಮೂಲದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆ ಬೆಂಗಳೂರಿನಲ್ಲಿದ್ದ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಗೌಪ್ಯವಾಗಿ ಅಶ್ಲೀಲ ಫೋಟೋ, ವಿಡಿಯೋ ತೆಗೆದಿದ್ದಾನೆ.

ಮಹಿಳೆ ಶಿವಮೊಗ್ಗದಲ್ಲಿ ಕೆಲಸ ಮಾಡುತ್ತಿದ್ದು, ಕರೆ ಮಾಡಿ ತನ್ನೊಂದಿಗೆ ಬರುವಂತೆ ಬ್ಲಾಕ್ ಮೇಲ್ ಮಾಡಿ ಬೆದರಿಸಿದ್ದಾನೆ.ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆಕೆಯ ಸಂಬಂಧಿಕರ ಮೊಬೈಲ್ ಸಂಖ್ಯೆ ತಿಳಿದುಕೊಂಡು ಖಾಸಗಿ ಫೋಟೋಗಳನ್ನು ಅವರಿಗೆ ಕಳುಹಿಸಿದ್ದಾನೆ. ನೊಂದ ಮಹಿಳೆ ಸಿಇಎನ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Also Read  ಟೂರಿಸ್ಟ್ ವಾಹನಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ      

 

error: Content is protected !!
Scroll to Top