4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಮೃತ್ಯು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ವ್ಯಕ್ತಿಯೊಬ್ಬ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 4ನೇ ಮಹಡಿಯಿಂದ ಜಿಗಿದು 31 ವರ್ಷದ ಮೊಹಮ್ಮದ್ ಹುಸೇನ್ ಮೃತಪಟ್ಟಿದ್ದಾನೆ.

ಬೊಮ್ಮನಹಳ್ಳಿ ಬೇಗೂರು ರಸ್ತೆಯಲ್ಲಿ ನಡೆದಿದೆ. ಮಹಮ್ಮದ್ ಹುಸೇನ್​ನನ್ನು ವಶಕ್ಕೆ ಪಡೆಯಲು ನಾಲ್ವರು ಪೊಲೀಸರ ತಂಡ ತೆರಳಿತ್ತು. ನಾಲ್ಕನೇ ಮಹಡಿಯ ಟೆರೇಸ್ ಮೇಲಿಂದ ವಶಕ್ಕೆ ಪಡೆಯುತ್ತಿದ್ದ ವೇಳೆ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Scroll to Top