ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ಪರಿಹಾರ ನೀಡುತ್ತೇವೆ.!➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.

ಬೆಂಗಳೂರು ಮಹಾನಗರದಲ್ಲಿ ಕಳೆದ ನಾಲ್ಕು ದಿನ ಸುರಿದ ಭಾರಿ ಮಳೆಯಿಂದ ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದ ಪ್ರತಿ ಕುಟುಂಬಗಳಿಗೆ 10000 ರೂ.ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

 

 

 

 

Scroll to Top