ಮಾರಾಕಾಸ್ತ್ರಗಳಿಂದ ಕೊಚ್ಚಿ `ಕಾಂಗ್ರೆಸ್ ಕಾರ್ಯಕರ್ತ’ನ ಬರ್ಬರ ಹತ್ಯೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25   ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತರ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ರವಿ ಹತ್ಯೆಗೂ ಮುನ್ನ ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ಬಳಿಕ ರವಿಯನ್ನು ಸಿಎಂಹೆಚ್ ಬಾರ್ ನಿಂದ ಅಟ್ಟಾಡಿಸಿಕೊಂಡು ಬಂದು ಹಳ್ಳಿ ರುಚಿ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

 

 

Scroll to Top