ಹೋಟೆಲ್‌ನ ಕೊಠಡಿಯೊಂದರಲ್ಲಿ ಚಲನಚಿತ್ರ ನಿರ್ದೇಶಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.25 ಭೋಜ್‌ಪುರಿ ಚಲನಚಿತ್ರ ನಿರ್ದೇಶಕ ಸುಭಾಷ್ ಚಂದ್ರ ತಿವಾರಿ ಅವರು ಉತ್ತರ ಪ್ರದೇಶದ ಸೋನ್‌ಭದ್ರಾದಲ್ಲಿರುವ ಹೋಟೆಲ್ನ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಸುಭಾಷ್ ಅವರು ತಮ್ಮ ತಂಡದೊಂದಿಗೆ ಸೋನ ಭದ್ರಾದಲ್ಲಿರುವ ಹೋಟೆಲ್ ತಿರುಪತಿಯಲ್ಲಿ ಚಲನಚಿತ್ರ ಚಿತ್ರೀಕರಣಕ್ಕಾಗಿ ತಂಗಿದ್ದರು. ಈ ವೇಳೆ ಅವರು ಮೃತಪಟ್ಟಿರುವುದಾಗಿ ತಿಳಿದಿದೆ. ಆದರೆ. “ಅವರ ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯನ್ನು ಪಡೆದ ನಂತರ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಯಶ್ವೀರ್ ಸಿಂಗ್ ಹೇಳಿದ್ದಾರೆ.

Also Read  ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 100 ರೂ. ಕಡಿತ

 

 

 

 

error: Content is protected !!
Scroll to Top