ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ದುರ್ಮರಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26  ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ಸತ್ತು ತೇಲುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ವಾಕಿಂಗ್ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರು ಮೀನುಗಳು ಸತ್ತು ತೇಲುತ್ತಿರುವುದನ್ನು ಗಮನಿಸಿದ್ದಾರೆ.

ಮಡಿವಾಳ ಕೆರೆ 252 ಎಕರೆ ವಿಸ್ತೀರ್ಣ ಹೊಂದಿದ್ದು ಕರ್ನಾಟಕ ಅರಣ್ಯ ಇಲಾಖೆ ಸುಪರ್ದಿಗೆ ಒಳಪಟ್ಟಿದೆ. ಮಡಿವಾಳ ಮಾತ್ರವಲ್ಲದ ನಗರದ ಹಲವು ಕೆರೆಗಳಲ್ಲಿ ಮೀನುಗಳು ಸಾಯುತ್ತಿರುವ ಘಟನೆಗಳು ವರದಿಯಾಗಿವೆ. ಕೆರೆಗೆ ಸೇರುತ್ತಿರುವ ಕೊಳಚೆ ನೀರು ಸಮರ್ಪಕವಾಗಿ ಸಂಸ್ಕರಣೆ ಮಾಡದೇ ಇರುವುದೇ ಇಂತಹ ಘಟನೆಗಳಿಗೆ ಕಾರಣ ಎಂದು ನಾಗರೀಕರು ಆರೋಪಿಸಿದ್ದಾರೆ.

Also Read  ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

 

 

error: Content is protected !!
Scroll to Top