ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.26  ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಆಶಿಶ್ (11) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಸ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್‌ಪುರ ಗ್ರಾಮದ ಬಳಿಯ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ.ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Scroll to Top