ಮಂಗಳೂರು: ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿಗೆ ಕುತ್ತು ➤ ನೇಮಕಾತಿ ರದ್ದುಗೊಳಿಸಿ ಆದೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.27. ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ.

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ ಎಂದು ವರದಿ ತಿಳಿಸಿದೆ.

 

Scroll to Top