ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್.!➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು,ಮೇ.27 ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶ್ರೀರಾಮಸೇನೆ ಮುಖಂಡನೋರ್ವನ ವಿರುದ್ಧ ಚಿಕ್ಕಮಗಳೂರು ನಗರ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಪೀಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಹಾಗೂ ಒಂದು ಸಮುದಾಯದವರ ಭಾವನೆಗಳಿಗೆ ಧಕ್ಕೆಯಾಗುವಂತಹ ಪೋಸ್ಟ್ ಹಾಕಿದ್ದಾನೆ. ಆದ್ದರಿಂದ ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಐಟಿ ಸೆಲ್ ಜಿಲ್ಲಾ ಕಾರ್ಯದರ್ಶಿ ಎಂ.ಎಲ್.ಎ. ಮಂಜು ನಗರದಲ್ಲಿರುವ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಬೆಂಗಳೂರು- ಮಂಗಳೂರು ರೈಲು; ಇಂದಿನಿಂದ ಮುರ್ಡೇಶ್ವರದವರೆಗೂ ವಿಸ್ತರಣೆ

 

error: Content is protected !!
Scroll to Top